ಕರ್ನಾಟಕ

karnataka

ETV Bharat / state

ಕಿಮ್ಸ್ ಆಡಳಿತಾಧಿಕಾರಿ ದುರ್ವರ್ತನೆ ಆರೋಪ: ತಡರಾತ್ರಿವರೆಗೂ ಪ್ರತಿಭಟನೆ ನಡೆಸಿದ ಶುಶ್ರೂಷಾ ಸಿಬ್ಬಂದಿ! - ಕೋವಿಡ್ ಕಾರ್ಯ

ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್​ಗಳನ್ನ ಸರಿಯಾಗಿ ನೀಡುತ್ತಿಲ್ಲ. ಈ ಬಗ್ಗೆ ಕೇಳಲು ಹೋದರೆ ಕಿಮ್ಸ್ ಆಡಳಿತಾಧಿಕಾರಿ ದಬ್ಬಾಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕಿಮ್ಸ್​ ಶುಶ್ರೂಷಾ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

KIMS Nursing staff
ಕಿಮ್ಸ್

By

Published : Jul 23, 2020, 7:37 AM IST

ಹುಬ್ಬಳ್ಳಿ:ವಿವಿಧ ಬೇಡಿಕೆಗಳ ಈಡೇರಿಕೆ‌ ಹಾಗೂ ಕಿಮ್ಸ್ ಆಡಳಿತಾಧಿಕಾರಿಗಳ ವರ್ತನೆ ಖಂಡಿಸಿ ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿ ತಡರಾತ್ರಿಯೂ ಕೂಡ ಪ್ರತಿಭಟನೆ ನಡೆಸಿದರು.

ತಡರಾತ್ರಿವರೆಗೂ ಪ್ರತಿಭಟನೆ ನಡೆಸಿದ ಶುಶ್ರೂಷಾ ಸಿಬ್ಬಂದಿ

ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್​ಗಳನ್ನ ಸರಿಯಾಗಿ ನೀಡುತ್ತಿಲ್ಲ. ಈ ಬಗ್ಗೆ ಕೇಳಲು ಹೋದರೆ ಕಿಮ್ಸ್ ಆಡಳಿತಾಧಿಕಾರಿ ರಾಜೇಶ್ವರಿ ಜೈನಾಪುರ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಲ್ಲದೇ, ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಶುಶ್ರೂಷಾ ಸಿಬ್ಬಂದಿ ಆರೋಪಿಸಿದ್ದಾರೆ.

ಕೂಡಲೇ ಕಿಮ್ಸ್ ಸಿಎಒ ರಾಜೇಶ್ವರಿ ಜೈನಾಪುರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಆದರೆ, ನಾಳೆ ಬೆಳಗ್ಗೆ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರಿಂದ ರಾತ್ರಿ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ.

ABOUT THE AUTHOR

...view details