ಕರ್ನಾಟಕ

karnataka

ETV Bharat / state

ಕಿತ್ತೂರು ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಿದ ವಚನಾನಂದ ಸ್ವಾಮೀಜಿ - ಕಿತ್ತೂರು ಚೆನ್ನಮ್ಮ ಪುತ್ಥಳಿಕೆಗೆ ಮಾಲಾರ್ಪಣೆ

ಹುಬ್ಬಳ್ಳಿಯಲ್ಲಿ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಆಚರಣೆ ಮಾಡಲಾಯ್ತು. ಇದೇ ವೇಳೆ ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸಲು ನಾವು ಹೋರಾಟ ನಡೆಸುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ರು.

kitturu rani chennamma jayantostava celebration in hubli
ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಣೆ

By

Published : Oct 23, 2020, 2:34 PM IST

ಹುಬ್ಬಳ್ಳಿ: ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ಪುತ್ಥಳಿಗೆ ಹರಿಹರದ ಪಂಚಮಸಾಲಿ‌ ಮಠದ ವಚನಾನಂದ ಸ್ವಾಮೀಜಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಣೆ

ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಿತ್ತೂರಿನ ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಅಗ್ರಗಣ್ಯ ಸ್ಥಾನ ಪಡೆದಿರುವ ಮಹಿಳೆಯಾಗಿದ್ದಾರೆ. ಅವರ ಸೇವೆ ನಿಜಕ್ಕೂ ಚಿರಸ್ಥಾಯಿಯಾಗಿದೆ ಎಂದರು. ಇನ್ನು ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡುವಂತೆ ಸುಮಾರು 25 ವರ್ಷದಿಂದ ಹೋರಾಟ ನಡೆಯುತ್ತಿದೆ. ಈ ಹೋರಾಟವನ್ನು ಮುಂದುವರಿಸುತ್ತೇವೆ. ಇದಕ್ಕೆ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಹೋರಾಟ ಮಾಡುತ್ತಿದ್ದಾರೆ ಅವರಿಗೂ ಕೂಡ ನಾವು ಬೆಂಬಲ ಸೂಚಿಸುತ್ತೇವೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾವು ಯಾರ ಕಿವಿಗೆ ಮುಟ್ಟಿಸಬೇಕೋ ಅವರಿಗೆ ಮುಟ್ಟಿಸಿದ್ದೇವೆ. ಅವರು ನ್ಯಾಯಕೊಡುವ ಎಲ್ಲ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ABOUT THE AUTHOR

...view details