ಹುಬ್ಬಳ್ಳಿ :ಧಾರವಾಡ ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದು, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ಕೆಎಂಎಫ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು... ಬಿಜೆಪಿಗೆ ತೀವ್ರ ಮುಖಭಂಗ - kannada news
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಸವರಾಜ ಅರಬಗೊಂಡ ಎಂಟು ಮತ ಪಡೆದು ಧಾರವಾಡ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಸವರಾಜ ಅರಬಗೊಂಡ ಕೆ.ಎಂ.ಎಫ್ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ
ಕುಂದಗೋಳ ಉಪಚುನಾವಣೆ ಕಾವಿನಲ್ಲಿಯೇ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಮರ್ಮಾಘಾತ ನೀಡಿ, ಇಲ್ಲಿನ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ವಶಪಡಿಸಿಕೊಂಡಿದೆ. ಬಿಜೆಪಿಯ ನಾಲ್ವರು ನಿರ್ದೇಶಕರನ್ನು ತನ್ನತ್ತ ಸೆಳೆಯುವಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಯಶಸ್ವಿಯಾಗಿದ್ದಾರೆ.
ಬೆಳಿಗ್ಗೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಸವರಾಜ ಅರಬಗೊಂಡ ಎಂಟು ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆರು ಮತಗಳನ್ನು ಪಡೆದು ಬಿಜೆಪಿ ಬೆಂಬಲಿತ ಶಂಕರ ಮುಗದ ಸೋಲು ಅನುಭವಿಸಿದರು.