ಕರ್ನಾಟಕ

karnataka

ETV Bharat / state

ಪ್ರವಾಹಕ್ಕೆ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು: ಕೊನರೆಡ್ಡಿ ಒತ್ತಾಯ!

ಉತ್ತರ ಕರ್ನಾಟಕದಲ್ಲಿ ಈ ಹಿಂದೆ ಅತಿವೃಷ್ಟಿಯಿಂದಾಗಿ ಜನರು ಮನೆ- ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆ ಪರಿಹಾರ ಹಣವೇ ಫಲಾನುಭವಿಗಳಿಗೆ ಬಂದಿಲ್ಲ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಎನ್​.ಹೆಚ್. ಕೋನರೆಡ್ಡಿ ಒತ್ತಾಯಿಸಿದ್ದಾರೆ.

konareddy talks about flood
ಮಾಜಿ ಶಾಸಕ ಎನ್​.ಹೆಚ್. ಕೋನಾರೆಡ್ಡಿ

By

Published : Aug 8, 2020, 2:33 PM IST

ಹುಬ್ಬಳ್ಳಿ: ಪ್ರವಾಹದ ಪೂರ್ವದಲ್ಲಿ ಶಾಶ್ವತ ಪರಿಹಾರ ಮಾಡಬೇಕು. ಆದರೆ ರಾಜ್ಯ ಸರ್ಕಾರ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವ ಕೆಲಸ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಕಳೆದ ವರ್ಷದ ಪರಿಹಾರವೇ ಇನ್ನೂ ಬಂದಿಲ್ಲ. ಸರ್ಕಾರ ಇದೆಯೊ ಇಲ್ಲವೋ ಗೊತ್ತಾಗುತ್ತಿಲ್ಲ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್​.ಹೆಚ್. ಕೋನರೆಡ್ಡಿ, ಮಾಜಿ ಶಾಸಕ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಈ ಹಿಂದೆ ಅತಿವೃಷ್ಟಿಯಿಂದಾಗಿ ಜನರು ಮನೆ - ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆ ಪರಿಹಾರ ಹಣವೇ ಫಲಾನುಭವಿಗಳಿಗೆ ಬಂದಿಲ್ಲ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಇದೀಗ ಜಿಲ್ಲೆಯಲ್ಲಿ ಬರುವ ತುಪ್ರಿ ಹಳ್ಳ, ಬೆಣ್ಣೆ ಹಳ್ಳ ತುಂಬಿರುವ ಪರಿಣಾಮ ಸುತ್ತಮುತ್ತಲಿನ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ ಎಂದರು.

ಅಷ್ಟೇ ಅಲ್ಲದೇ ರೈತರು ಬೆಳೆದ ಬೆಳಗಳು ಹಾನಿಗೊಳಗಾಗಿವೆ. ಆದ್ದರಿಂದ ಅಧಿಕಾರಿಗಳಿಗೆ ಹಣ ಕೊಟ್ರೆ ಮಾತ್ರ ಕೆಲಸ ಮಾಡಲು ಸಾಧ್ಯ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸರ್ಕಾರ ಹೇಳಿದೆ. ನೋಡಲ್ ಅಧಿಕಾರಿಗಳ ನೇಮಕ ಮಾಡಿದ್ದೇವೆ ಎಂದೂ ಹೇಳಿದೆ. ಪರಿಹಾರದ ಹಣ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಯಾವ ಅಧಿಕಾರಿಗಳು ಪ್ರವಾಹ ಬಂದ ಸ್ಥಳಗಳಿಗೆ ಹೋಗುತ್ತಿಲ್ಲ ಎಂದು ಆರೋಪಿಸಿದ್ರು. ಇದೇ ವೇಳೆ, ಕೇಂದ್ರ ಸರ್ಕಾರ, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details