ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಕೊವಿಡ್- 19 ವೈರಸ್ ಶಂಕೆ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹೈಅಲರ್ಟ್ - ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೈ ಅಲರ್ಟ್

ರಾಜ್ಯದಲ್ಲಿ ಕೊವಿಡ್- 19 ವೈರಸ್ ಶಂಕೆ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

High alert at Kim's Hospital Hubli
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೈ ಅಲರ್ಟ್

By

Published : Mar 3, 2020, 12:37 PM IST

ಹುಬ್ಬಳ್ಳಿ:ರಾಜ್ಯದಲ್ಲಿ ಕೊವಿಡ್- 19 ವೈರಸ್ ಶಂಕೆ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕಿಮ್ಸ್​​ನ ಎಲ್ಲ ಸಿಬ್ಬಂದಿ ಹಾಗೂ ವೈದ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಲ್ಲದೇ ಕಿಮ್ಸ್​​ಗೆ ಆಗಮಿಸುವ ರೋಗಿಗಳು, ರೋಗಿಗಳ ಸಂಬಂಧಿಗಳು ಕೂಡ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ ಎಂದು ಈ ಬಗ್ಗೆ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಮಾಹಿತಿ ನೀಡಿದ್ದಾರೆ.

ಕೊವಿಡ್ 19 ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರನ್ನು ಈ ವಾರ್ಡ್​ನಲ್ಲಿ ಉಪಚರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ವೈರಸ್ ನಿಯಂತ್ರಣ ಮಾಡಲು ಅಗತ್ಯ ಸಿಬ್ಬಂದಿ ಹಾಗೂ ಔಷಧಿ ವ್ಯವಸ್ಥೆಯನ್ನು ಮಾಡಲಾಗಿದೆ.

ಜೊತೆಗೆ ನಗರದ ವಿಮಾನ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನ ಸಂದಣಿ ಇರುವಲ್ಲಿ ತಪಾಸಣೆ ನಡೆಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.

ABOUT THE AUTHOR

...view details