ಹುಬ್ಬಳ್ಳಿ: ರಾಜ್ಯದಲ್ಲಿ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮಾಸ್ಕ್ ವಿತರಿಸಲಾಯಿತು.
ಪಿಯು ವಿದ್ಯಾರ್ಥಿಗಳಿಗೆ ಕೇಂದ್ರ ಸಚಿವರ ಕ್ಷಮತಾ ಸೇವಾ ಟ್ರಸ್ಟ್ ವತಿಯಿಂದ ಸಹಾಯ ಹಸ್ತ - Union Minister Pralhad Joshi news
ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ರಿಪಲ್ ಲೇಯರ್ ಮಾಸ್ಕ್ ಹಾಗೂ ಥರ್ಮಲ್ ಥರ್ಮೋಮೀಟರ್‌ಗಳನ್ನು ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ್ ಚೌಹಾಣ್ ಅವರ ನೇತೃತ್ವದಲ್ಲಿ ಆಯಾ ಕಾಲೇಜಿನ ನಿರ್ದೇಶಕರಿಗೆ ಹಾಗೂ ಸಿಬ್ಬಂದಿಗೆ ವಿತರಿಸಿದರು.
Mask distribution
ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ರಿಪಲ್ ಲೇಯರ್ ಮಾಸ್ಕ್ ಹಾಗೂ ಥರ್ಮಲ್ ಥರ್ಮೋಮೀಟರ್‌ಗಳನ್ನು ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ್ ಚೌಹಾಣ್ ಅವರ ನೇತೃತ್ವದಲ್ಲಿ ಆಯಾ ಕಾಲೇಜಿನ ನಿರ್ದೇಶಕರಿಗೆ ಹಾಗೂ ಸಿಬ್ಬಂದಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ವಿರೂಪಾಕ್ಷಿ ರಾಯನಗೌಡ್ರ, ಗೋಪಾಲ ಬದ್ದಿ, ಅಶೋಕ ವಾಲ್ಮೀಕಿ, ಸೆಂಟ್ರಲ್ ಯುವ ಮೋರ್ಚಾ ಅದ್ಯಕ್ಷ ಅವಿನಾಶ ಹರಿವಾಣ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕೊಪ್ಪದ್ ಹಾಗೂ ಕಾಲೇಜ್ ಸಿಬ್ಬಂದಿ ಉಪಸ್ಥಿತರಿದ್ದರು.