ಕರ್ನಾಟಕ

karnataka

ETV Bharat / state

ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮಕ್ಕೆ ಕ್ಷತ್ರೀಯ ಸಮಾಜ ಆಗ್ರಹ - ಹುಬ್ಬಳ್ಳಿ ಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಉದಯ್ ಸಿಂಗ್

ಶಾಸಕ ಮುರುಗೇಶ್ ನಿರಾಣಿ ಅವರ ಮಿಡಿಯಾ ಗ್ರೂಪ್​ನಲ್ಲಿ ಇತ್ತೀಚೆಗೆ ಹಿಂದೂ ಪವಿತ್ರ ದೇವತೆಗಳ ಬಗ್ಗೆ ಅವಹೇಳನ ಕಾರಿ ಪೋಸ್ಟ್ ಹರಿದಾಡಿವೆ. ಇದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ. ಹಾಗಾಗಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹುಬ್ಬಳ್ಳಿ ಕ್ಷತ್ರೀಯ ಒಕ್ಕೂಟ ಒತ್ತಾಯಿಸಿದೆ.

Kshatriya society
ಬಿಜೆಪಿ ಶಾಸಕ ಮುರಗೇಶ್ ನಿರಾಣೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕ್ಷತ್ರಿಯ ಸಮಾಜ

By

Published : Aug 21, 2020, 7:28 PM IST

ಹುಬ್ಬಳ್ಳಿ:ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರ ಮೀಡಿಯಾ ಗ್ರೂಪ್ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದು, ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹುಬ್ಬಳ್ಳಿ ಕ್ಷತ್ರೀಯ ಒಕ್ಕೂಟದ ಅಧ್ಯಕ್ಷ ಉದಯ್ ಸಿಂಗ್ ಒತ್ತಾಯಿಸಿದರು.

ಬಿಜೆಪಿ ಶಾಸಕ ನಿರಾಣಿ ವಿರುದ್ಧ ಕಾನೂನು ಕ್ರಮಕ್ಕೆ ಕ್ಷತ್ರೀಯ ಸಮಾಜ ಆಗ್ರಹ

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ನಿರಾಣಿ ಅವರ ಮೀಡಿಯಾ ಗ್ರೂಪ್​ನಲ್ಲಿ ಇತ್ತೀಚೆಗೆ ಹಿಂದೂ ಪವಿತ್ರ ದೇವತೆಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿದಾಡಿದೆ. ಇದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಕೆಲಸ. ಈ ಕುರಿತು ಗೃಹ ಇಲಾಖೆಗೆ ದೂರು ಸಲ್ಲಿಸಿದರೂ ಸಹ ಈವರೆಗೆ ರಾಜ್ಯ ಸರ್ಕಾರ ಗೃಹ ಇಲಾಖೆ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಹಲವಾರು ಹಿಂದೂ ಸಂಘಟನೆಗಳು ಸೇರಿಕೊಂಡು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details