ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷ ಕುಂದಗೋಳ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಬೇಕು ಎಂದು ರಣತಂತ್ರ ರೂಪಿಸಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪ್ರತಿತಂತ್ರ ರೂಪಿಸಿದೆ.
ಇಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಬಿಜೆಪಿ ಸಭೆ ಸಭೆಯಲ್ಲಿ ಬಿಎಸ್ವೈ, ಶ್ರೀರಾಮುಲು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಎಸ್ ಐ ಚಿಕ್ಕನಗೌಡರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಭಾಗಿಯಾಗಿದ್ದಾರೆ.
ಕುಂದಗೋಳ ಉಪ ಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿರುವ ನಾಯಕರು ಮೈತ್ರಿ ನಾಯಕರು ಚುನಾವಣೆಯಲ್ಲಿ ಅನುಸರಿಸುತ್ತಿರುವ ರಣನೀತಿಗಳಿಗೆ ಪ್ರತಿತಂತ್ರ ಹೆಣೆಯುತ್ತಿದ್ದಾರೆ.