ಹುಬ್ಬಳ್ಳಿ:ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಜನವರಿ 15 ರಿಂದ ಪೆಬ್ರವರಿ 7ರ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕುರುಬ ಸಮುದಾಯ ಎಸ್ಟಿಗೆ ಸೇರಿಸುವಂತೆ ಫೆ.27 ರಂದು ಬೃಹತ್ ಪಾದಯಾತ್ರೆ!
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಜನವರಿ 15 ರಿಂದ ಕಾಗಿನೆಲೆಯಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕುರುಬ ಸಮುದಾಯದ ಮುಖಂಡರು ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಟಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಈ ಕುರಿತು ಮಾಹಿತಿ ನೀಡಿದ್ರು. ಕಾಗಿನೆಲೆಯಿಂದ ಬೆಂಗಳೂರಿಗೆ ಕನಕ ಗುರುಪೀಠ ಗುರುಗಳ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದ್ರು.
ಕುರುಬರು ದಕ್ಷಿಣ ಭಾರತದ ಅತ್ಯಂತ ಪುರಾತನ ಮೂಲ ನಿವಾಸಿಗಳು, ಅರೆನಾಗರಿಕ ಬುಡಕಟ್ಟು ಜನಾಂಗದವರೆಂದು ಹಿಂದೆ ಬ್ರಿಟಿಷರ ದಾಖಲೆಗಳಲ್ಲಿ ಉಲ್ಲೇಖವಿದೆ. ಆದ್ದರಿಂದ ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸುವಂತ ಒತ್ತಾಯಿಸಿದರು. ಇತ್ತೀಚಿಗೆ ಕುರುಬ ಜಾತಿಯ ಕೆಲವು ಪಂಗಡಗಳು ಪರಿಶಿಷ್ಟ ಜಾತಿಗೆ ಸೇರಿ ಸೌಲಭ್ಯಗಳನ್ನು ಪಡೆಯುತ್ತಿವೆ. ಇದರಿಂದ ಮೂಲ ಕುರುಬ ಜನಾಂಗದವರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಜ.15 ರಿಂದು ರಾಜ್ಯದ ಎಲ್ಲ ಕುರುಬ ಸಮುದಾಯದ ಮುಖಂಡರ ಜನಪ್ರತಿನಿಧಿಗಳ ನೇತೃತ್ವದಲ್ಲಿ ಬೆಂಗಳೂರು ಪಾದಯಾತ್ರೆ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಕುರುಬ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಲಾಗುತ್ತದೆ ಎಂದು ಕೆ.ವಿರೂಪಾಕ್ಷಪ್ಪ ಹೇಳಿದ್ರು.