ಹುಬ್ಬಳ್ಳಿ: ಕುಂದಗೋಳ ಕ್ಷೇತ್ರಕ್ಕೆ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಪತಿಯ ಮೇಲಿರುವ ಜನತೆಯ ಅಭಿಮಾನ ಮತ್ತು ಪ್ರೀತಿ ನನ್ನ ಗೆಲುವಿನ ಅಸ್ತ್ರ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ತಿಳಿಸಿದರು.
ಪತಿ ನೆನೆದು ಭಾವುಕರಾದ ಕೈ ಅಭ್ಯರ್ಥಿ... ಕುಂದಗೋಳದಲ್ಲಿ ಕುಸುಮಾ ಶಿವಳ್ಳಿಗೆ ಗೆಲುವಿನ ವಿಶ್ವಾಸ - news kannada
ಕುಂದಗೋಳ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಸುಮಾ ಶಿವಳ್ಳಿ ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಅಗಲಿದ ಪತಿ ನೆನೆದು ಭಾವುಕರಾದರು.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ
ಕುಂದಗೋಳ ವಿಧಾನಸಭಾ ಉಪ ಚುನಾವಣೆಗೆ ನಾಮಪಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಈ ಚುನಾವಣೆಯಲ್ಲಿ ತನ್ನ ಗೆಲುವು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮಲ್ಲಿ ಯಾವುದೇ ಬಂಡಾಯ ಇಲ್ಲ. ಪತಿ ಎಸ್ ಎಸ್ ಶಿವಳ್ಳಿ ಮೇಲಿರುವ ಅಭಿಮಾನದಿಂದ ಎಲ್ಲರೂ ಕೂಡ ನನ್ನನ್ನು ಬೆಂಬಲಿಸುತ್ತಾರೆ ಎಂದು ಪತಿಯನ್ನು ನೆನೆದು ಕಣ್ಣೀರು ಹಾಕಿದರು.