ಕರ್ನಾಟಕ

karnataka

ETV Bharat / state

ಕುಸುಮಾ ಶಿವಳ್ಳಿಯವರು ಅತ್ಯಧಿಕ ಮತಗಳಿಂದ ಜಯ ಗಳಿಸುತ್ತಾರೆ: ಯು.ಟಿ .ಖಾದರ್ - undefined

ಮೈತ್ರಿ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಕೂಡ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರು ಅಧಿಕಾರಕ್ಕಾಗಿ ಹೊಡೆದಾಡುತ್ತಿದ್ದಾರೆ. ಕುಂದಗೋಳ ಉಪಚುನಾವಣೆಯಲ್ಲಿ ಕುಸುಮಾ ಶಿವಳ್ಳಿಯವರು ಅತ್ಯಧಿಕ ಮತಗಳಿಂದ ಜಯ ಗಳಿಸಲಿದ್ದಾರೆ ಎಂದು ಸಚಿವ ಯು.ಟಿ. ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯು.ಟಿ .ಖಾದರ್

By

Published : May 12, 2019, 11:46 PM IST

ಹುಬ್ಬಳ್ಳಿ:ಕುಂದಗೋಳ ಉಪಚುನಾವಣೆಯಲ್ಲಿ ಕುಸುಮಾ ಶಿವಳ್ಳಿಯವರು ಅತ್ಯಧಿಕ ಮತಗಳಿಂದ ಜಯ ಗಳಿಸಲಿದ್ದಾರೆ ಎಂದು ಸಚಿವ ಯು.ಟಿ .ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮೈತ್ರಿ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಕೂಡ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರು ಅಧಿಕಾರಕ್ಕಾಗಿ ಹೊಡೆದಾಡುತ್ತಿದ್ದಾರೆ. ಆದರೆ ನಾವು ಅಭಿವೃದ್ಧಿ ಹಾಗೂ ಜನರ ಪರವಾಗಿ ಮತ ಕೇಳುತ್ತಿದ್ದೇವೆ. ಅವರು ಅಧಿಕಾರಕ್ಕೆ ಮತ ಕೇಳುತ್ತಿದ್ದಾರೆ.‌ ಮೈತ್ರಿ ಸರ್ಕಾರ ಜನರು ಕೊಟ್ಟ ತೀರ್ಪು. ಯಾವ ಪಕ್ಷಕ್ಕೂ ಜನರು ಅಧಿಕಾರ ಕೊಟ್ಟಿಲ್ಲ.‌ ಸಮಿಶ್ರ ಸರ್ಕಾರ ಜನ‌ಪರ ಕೆಲಸ ಮಾಡುತ್ತಿದೆ. ಆದರೆ ವಿರೋಧ ಪಕ್ಷದವರು ಕಾಲೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದರು‌.

ಯು.ಟಿ .ಖಾದರ್

ಐದು ವರ್ಷ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತದೆ. ಯಾರು ಎಷ್ಟೇ ಪ್ರಯತ್ನ ಪಟ್ಟರು ಇದನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅಧಿಕಾರ ದಾಹದಿಂದ ಓಡಾಡುತ್ತಿದ್ದಾರೆ‌. ಸಮ್ಮಿಶ್ರ ಸರ್ಕಾರಕ್ಕೆ ಜನಾದೇಶ ಸಿಕ್ಕಿದೆ. ನಮ್ಮ ಸಂಪೂರ್ಣ ಬೆಂಬಲ ಕುಮಾರಸ್ವಾಮಿಯವರಿಗಿದೆ. ನಮ್ಮ ನಡುವೆ ಗೊಂದಲ ಸೃಷ್ಟಿಸಲು ಯಾರೇ ಪ್ರಯತ್ನಿಸಿದ್ರೂ ಯಶಸ್ವಿಯಾಗಲಿಲ್ಲ. ಆದರೂ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಅಷ್ಟೇ. ಸಿಎಂ ಕುಮಾರಸ್ವಾಮಿ ನಾಳೆ ಕುಂದಗೋಳದ ಕುಸುಮಾ ಶಿವಳ್ಳಿ ಪರ ಪ್ರಚಾರ ಹಾಗೂ ಸಭೆಗಳಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಹೆಚ್.ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ಸಮನ್ವಯ ಸಮಿತಿಯಲ್ಲಿ ಕುಳಿತು ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ವರಿಷ್ಠರು ಎಲ್ಲ ಗೊಂದಲಗಳನ್ನು ಬಗೆಹರಿಸುತ್ತಾರೆ. ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು, ಮುಖ್ಯಮಂತ್ರಿ, ಮೈತ್ರಿ ಧರ್ಮವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details