ಹುಬ್ಬಳ್ಳಿ: 'ನಾವು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಂದಾಗ ಆ ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಿರಿಯರಾದ ಎಚ್. ವಿಶ್ವನಾಥ್ ಅನಗತ್ಯವಾಗಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಾರದು' ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿಶ್ವನಾಥ್ ಯಾವ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಕುರಿತು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ಅವರಿಗೆ ಕರೆ ಮಾಡಿದರೆ, ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು' ಎಂದರು.