ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯ ಬಗ್ಗೆ ಈಟಿವಿ ಭಾರತ ವರದಿ ಬಿತ್ತರಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದಿದ್ದಾರೆ.
ಶೀಘ್ರದಲ್ಲಿ ಕಿಮ್ಸ್ ವೈದ್ಯರ ಕೊರತೆ ನೀಗಿಸುತ್ತೇವೆ : ಸಚಿವ ಶೆಟ್ಟರ್ ಭರವಸೆ - ಕಿಮ್ಸ್ ವೈದ್ಯರ ಕೊರತೆ ನೀಗಿಸುವುದಾಗಿ ಸಚಿವ ಶೆಟ್ಟರ್ ಭರವಸೆ
ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.
ಕಿಮ್ಸ್ ವೈದ್ಯರ ಕೊರತೆ ನೀಗಿಸುವುದಾಗಿ ಸಚಿವ ಶೆಟ್ಟರ್ ಭರವಸೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಲ ಕಾಲಕ್ಕೆ ನೇಮಕಾತಿಗಳಾಗಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಇದು ನಮ್ಮ ಸರ್ಕಾರದ ಅವಧಿಯಲ್ಲಿ ಆಗಿರುವ ಸಮಸ್ಯೆ ಅಲ್ಲ. ಹಿಂದಿನ ಸರ್ಕಾರ ಸರಿಯಾದ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ಮಾಡದೆ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಈಗ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಕೂಡಲೇ ಇದರ ಬಗ್ಗೆ ಕಾಳಜಿ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.