ಹುಬ್ಬಳ್ಳಿ: ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಪುತ್ರಿಯ ವಿವಾಹ ನಿಶ್ಚಿತಾರ್ಥ ಮಾಡಿದ್ದಾರೆ.
ಹುಬ್ಬಳ್ಳಿ ಹುಡುಗನ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ - ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್
ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರಿಯ ಮದುವೆ ನಿಶ್ಚಯ ನಡೆದಿದೆ. ಈ ವಿಚಾರವನ್ನು ಖುದ್ದು ಹೆಬ್ಬಾಳ್ಕರ್ ಅವರೇ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್
ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠರ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ಹೆಬ್ಬಾಳ್ಕರ್ ಪುತ್ರಿಯ ಮದುವೆ ನಿಶ್ಚಯ ನಡೆದಿದೆ.
ನಿನ್ನೆ ಧಾರವಾಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಮಗಳಿಗೆ ರಜತ ಜೊತೆ ವಿವಾಹ ನಿಶ್ಚಯ ಮಾಡಿಕೊಂಡಿರುವುದನ್ನು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ. ರಜತ ನನ್ನ ಅಳಿಯನಲ್ಲ, ನನ್ನ ಮಗ. ಆದ್ದರಿಂದ ಅವನಿಗೆ ನಿಮ್ಮ ಆಶೀರ್ವಾದ ಬೇಕು ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.