ಧಾರವಾಡ :ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ವಿನಯ್ ಕುಲಕರ್ಣಿ ಮನೆಗೆ ಲಕ್ಷ್ಮಿ ಹೆಬ್ಬಾಳ್ಕರ್.. ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕಿ - ವಿನಯ್ ಕುಲಕರ್ಣಿ ಕುಟುಂಬಕ್ಕೆ ಧೈರ್ಯ ತುಂಬಿದ ಲಕ್ಷ್ಮೀ ಹೆಬ್ಬಾಳ್ಕರ್
ಬಿಜೆಪಿಯವರ ಕೈಯಲ್ಲಿ ಅಧಿಕಾರ ಇದೆ, ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸತ್ಯ ಮೇವ ಜಯತೆ, ಸತ್ಯ ಯಾವಾಗಲೂ ಜಯಿಸುತ್ತದೆ. ನಮಗೆ ಕಾನೂನಿನ ಮೇಲೆ ನಂಬಿಕೆಯಿದೆ..
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬಳಿಕ ಮಾತನಾಡಿದ ಅವರು, ವಿನಯ್ ಅವರು ಈ ಪ್ರಕರಣದಲ್ಲಿ ಗೆದ್ದು ಬರುತ್ತಾರೆ. ಅವರೊಂದಿಗೆ ಸಿದ್ದರಾಮಯ್ಯ ಸೇರಿದಂತೆ, ಕಾಂಗ್ರೆಸ್ ಪಕ್ಷದ ಕಟ್ಟಕಡೆಯ ಕಾರ್ಯಕರ್ತ ಕೂಡ ಇದ್ದಾನೆ. ಇದು ಬಿಜೆಪಿಯ ತಂತ್ರ, ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯವರ ಕೈಯಲ್ಲಿ ಅಧಿಕಾರ ಇದೆ, ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸತ್ಯ ಮೇವ ಜಯತೆ, ಸತ್ಯ ಯಾವಾಗಲೂ ಜಯಿಸುತ್ತದೆ. ನಮಗೆ ಕಾನೂನಿನ ಮೇಲೆ ನಂಬಿಕೆಯಿದೆ. ವಿನಯ್ ಅವರಿಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವ ಭರವಸೆ ಇದೆ ಎಂದರು.