ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಕೊರೊನಾ, ಗುಜರಾತಿನಿಂದ ಬಂದ 9 ಮಂದಿಯಲ್ಲಿ ಸೋಂಕು ದೃಢ

ಅಹಮದಾಬಾದ್​ನಿಂದ ಆಗಮಿಸಿದ್ದ 9 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

kims
ಕಿಮ್ಸ್​

By

Published : May 12, 2020, 3:30 PM IST

ಧಾರವಾಡ :ಗುಜರಾತ್​ನ​​ ಅಹಮದಾಬಾದ್​ನಿಂದ ಜಿಲ್ಲೆಗೆ ಆಗಮಿಸಿದ್ದ 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 21ಕ್ಕೆ ಏರಿಕೆಯಾಗಿದೆ. ಈಗಾಗಲೇ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ

ಹುಬ್ಬಳ್ಳಿಯಲ್ಲಿ ಸೋಂಕಿತರು

ಗುಜರಾತಿನಿಂದ ಆಗಮಿಸಿದ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯಲ್ಲಿ ನೋಂದಣಿ ಮಾಡಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿತ್ತು. ಬಂದ ಕೂಡಲೇ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವುದರಿಂದ ಹುಬ್ಬಳ್ಳಿಯ ಕಿಮ್ಸ್​​​ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details