ಧಾರವಾಡ:ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಯಿತು.
ಧಾರವಾಡ: ವಿವಿಧ ಬೇಡಿಕೆಗೆ ಆಗ್ರಹಿಸಿ ಪದವಿ ಪೂರ್ವ ಉಪನ್ಯಾಸಕರಿಂದ ಸಾಂಕೇತಿಕ ಧರಣಿ - Lecturers protest for various demands in dharwad
ಧಾರವಾಡದ ಜಿಲ್ಲಾಧಿಕಾರಿ ಎದುರು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರು ಸಾಂಕೇತಿಕ ಉಪವಾಸ ಮಾಡುವ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
![ಧಾರವಾಡ: ವಿವಿಧ ಬೇಡಿಕೆಗೆ ಆಗ್ರಹಿಸಿ ಪದವಿ ಪೂರ್ವ ಉಪನ್ಯಾಸಕರಿಂದ ಸಾಂಕೇತಿಕ ಧರಣಿ Lecturers protest for various demands](https://etvbharatimages.akamaized.net/etvbharat/prod-images/768-512-5201900-thumbnail-3x2-dwd.jpg)
ವಿವಿಧ ಬೇಡಿಕೆಗೆ ಆಗ್ರಹಿಸಿ ಸಾಂಕೇತಿಕ ಧರಣಿ
ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ಸಾಂಕೇತಿಕ ಧರಣಿ ಆರಂಭಿಸಿರುವ ಉಪನ್ಯಾಸಕರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದರು.
ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವುದು ಮತ್ತು ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡುವುದು. ಅನುದಾನಿತ ಕಾಲೇಜುಗಳ ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸಬೇಕು. ರಾಜ್ಯದಲ್ಲಿ ಖಾಲಿಯಿರುವ 600 ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಹುದ್ದೆ ತುರ್ತಾಗಿ ಪದೋನ್ನತಿ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.