ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಎಡಪಕ್ಷಗಳ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎಡಪಕ್ಷಗಳಿಂದ ಪ್ರತಿಭಟನೆ! - ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಎಡಪಕ್ಷಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದವು
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಾರ್ಮಿಕ ಕಾನೂನುಗಳ ತಿದ್ದುಪಡಿ, ಸಾರ್ವಜನಿಕ ವಲಯಲದ ಉದ್ಯಮಗಳ ಖಾಸಗೀಕರಣ ಈ ನೀತಿಗಳನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿದರು. ಈ ವೇಳೆ ಸಿಪಿಐ ನ ಮಹೇಶ ಪತ್ತಾರ ಮಾತನಾಡಿ, ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೊರುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಸೂಕ್ತ ಕ್ರಮವನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತಿಲ್ಲ. ಸಾರ್ವಜನಿಕರ ಸಂಕಷ್ಟವನ್ನು ಆಲಿಸಬೇಕಿದ್ದ ಕೇಂದ್ರ ಸರ್ಕಾರ ಜನತೆಯ ಅಳಲನ್ನು ಕೇಳುತ್ತಿಲ್ಲ.
ಅಲ್ಲದೇ ನೆರೆ ಹಾವಳಿಯಿಂದ ರಾಜ್ಯದಲ್ಲಿ ಜನತೆ ಅಕ್ಷರಶಃ ನರಕಯಾತನೆ ಅನುಭವಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದ ಹಾಗೂ ದೇಶದ ಆರ್ಥಿಕ ಬಿಕ್ಕಟ್ಟಿಗೆ ಮತ್ತು ಸಾರ್ವಜನಿಕ ಸಂಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸಬೇಕು. ಅಲ್ಲದೇ ಕೇಂದ್ರ ತೆಗೆದುಕೊಂಡಿರುವ ನೀತಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿದರು.