ಕರ್ನಾಟಕ

karnataka

ETV Bharat / state

ಜನಪ್ರತಿನಿಧಿಗಳಿಗೂ ಕಾಡುತ್ತಿರುವ ಕೊರೊನಾ: ಶಾಸಕ ಅರವಿಂದ ಬೆಲ್ಲದಗೆ​ ಪಾಸಿಟಿವ್ - ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ

ಹುಬ್ಬಳ್ಳಿ - ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಇಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೊನಾ ಪಾಸಿಟಿವ್​ ಎಂಬ ವರದಿ ಬಂದಿರುವುದಾಗಿ ತಿಳಿಸಿದ್ದಾರೆ.

Legisalture Aravind Bellada
ಶಾಸಕ ಅರವಿಂದ ಬೆಲ್ಲದ

By

Published : Oct 3, 2020, 8:00 PM IST

ಧಾರವಾಡ: ಹುಬ್ಬಳ್ಳಿ - ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ.

ಇಂದು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೊನಾ ಪಾಸಿಟಿವ್​ ಎಂಬ ವರದಿ ಬಂದಿರುವುದರಿಂದಾಗಿ ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ಈ ಕುರಿತು ಸಾರ್ವಜನಿಕರು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಭಯಪಡುವ ಅಗತ್ಯವಿಲ್ಲ ಹಾಗೂ ದೂರವಾಣಿ ಸಂಪರ್ಕ ಮಾಡುವುದು ಸಹ ಬೇಡ ಎಂದು ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಕರ್ತರ ವಿಶ್ವಾಸ, ಅಭಿಮಾನ ಹಾಗೂ ಭಗವಂತನ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ. ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details