ಹುಬ್ಬಳ್ಳಿ:ಬಿಜೆಪಿಯಲ್ಲಿ ವೀರಶೈವ ಸಮಾಜವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಮಹಾಸಭಾ ಕುಂದಗೋಳ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಿಜೆಪಿಯಲ್ಲಿ ವೀರಶೈವ ಸಮಾಜವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ವೀರಶೈವ ಸಮಾಜಕ್ಕೆ ಉನ್ನತ ಸ್ಥಾನಕ್ಕಾಗಿ ಜಗದೀಶ್ ಶೆಟ್ಟರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮಂಜುನಾಥ ಯಂಟ್ರಾವಿ ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರದಲ್ಲಿ ''ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಾಹೇಬರಿಗೆ ವಿನಂತಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ನಮ್ಮ ವೀರಶೈವ ಸಮಾಜದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಸಾಹೇಬರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಕೊಡಲೇಬೇಕೆಂದು ತಮ್ಮಲ್ಲಿ ಒತ್ತಾಯಿಸುತ್ತೇನೆ. ಇದರಿಂದ ಲೋಕ ಸಭಾ ಚುನಾವಣೆಗೂ ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ'' ಎಂದು ಉಲ್ಲೇಖಿಸಿದ್ದಾರೆ.
ಮಂಜುನಾಥ ಯಂಟ್ರಾವಿ ಅಖಿಲ ಭಾರತ ವೀರಶೈವ ತಾಲೂಕು ಅಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಇದನ್ನೂ ಓದಿ:ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್