ಹುಬ್ಬಳ್ಳಿ:ಹು-ಧಾ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ವಿಪರೀತವಾಗುತ್ತಿದ್ದು, ಇದನ್ನು ತಪ್ಪಿಸುವ ದೃಷ್ಟಿಯಿಂದ ಬೈಪಾಸ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಿಂದ ಧಾರವಾಡದ ನರೇಂದ್ರ ಕ್ರಾಸ್‌ವರೆಗಿನ ಸುಮಾರು 29.04 ಕಿ.ಮೀ. ಕಿರಿದಾದ ರಸ್ತೆಯಾಗಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಸಂಸ್ಥೆ ನಿರ್ಮಿಸಿರುವ ಈ ರಸ್ತೆ ಇಲ್ಲಿಯವರೆಗೆ ಸರಿ ಸುಮಾರು 645 ಜನರನ್ನು ಬಲಿ ತೆಗೆದುಕೊಂಡಿದೆ. ಅದಕ್ಕಾಗಿ ರಸ್ತೆಯನ್ನು ಚತುಷ್ಪಥ ರಸ್ತೆ ಮಾಡಲು ಅನೇಕ ಬಾರಿ ಸರ್ಕಾರಕ್ಕೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಎರಡು ಸಲ ಇದರ ಬಗ್ಗೆ ವಿಷಯ ಪ್ರಸ್ತಾಪವಾಗಿದೆ. ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ದುರ್ದೈವದ ಸಂಗತಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.