ಧಾರವಾಡ :ಲಾಕ್‌ಡೌನ್ ಅವಧಿಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಲಿಂಗಾಯತ ಕಂಬಾರ- ಬಡಿಗೇರ ವೃತ್ತಿ ನಡೆಸುವ ಸಮುದಾಯಕ್ಕೆ ಸರ್ಕಾರ ಸೂಕ್ತ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಆರ್ಥಿಕ ಪ್ಯಾಕೇಜ್ ನೀಡುವಂತೆ ಲಿಂಗಾಯತ ಕಂಬಾರ-ಬಡಿಗೇರ ಸಂಘದ ಮನವಿ.. - ಧಾರವಾಡ ಸುದ್ದಿ
ಸರ್ಕಾರ ಇತರ ಶ್ರಮಿಕ ವರ್ಗಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದಂತೆ ಕುಂಬಾರ ಮತ್ತು ಬಡಿಗೇರ ಸಮುದಾಯಕ್ಕೂ ಸಹಾಯ ಕಲ್ಪಿಸಬೇಕು ಎಂದು ಅಖಿಲ ಕರ್ನಾಟಕ ಲಿಂಗಾಯತ ಕಂಬಾರ- ಬಡಿಗೇರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಲಾಕ್‌ಡೌನ್ : ಆರ್ಥಿಕ ಪ್ಯಾಕೇಜ್ ನೀಡುವಂತೆ ಲಿಂಗಾಯತ ಕಂಬಾರ- ಬಡಿಗೇರ ಸಂಘದ ಮನವಿ
ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ ಮೂಲ ವೃತ್ತಿ ನಂಬಿಕೊಂಡ ಕಂಬಾರ ಹಾಗೂ ಬಡಿಗೇರ ಕುಟುಂಬಗಳು ಆದಾಯ ಇಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಅಲ್ಲದೆ ಕುಟುಂಬ ನಿರ್ವಹಣೆ ಕೂಡ ಕಷ್ಟವಾಗಿದೆ.
ಆದ್ದರಿಂದ ಸಿಎಂ ಬಿ ಎಸ್ ಯಡಿಯೂರಪ್ಪ ಇತರ ಶ್ರಮಿಕ ವರ್ಗಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದಂತೆ ಕಂಬಾರ ಮತ್ತು ಬಡಿಗೇರ ಸಮುದಾಯಕ್ಕೂ ಸಹಾಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.