ಧಾರವಾಡ: ನಗರದಲ್ಲಿ ಲಾಕ್ಡೌನ್ ಹಿನ್ನೆಲೆ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಲಾಕ್ಡೌನ್ ಹಿನ್ನೆಲೆ ಸರಳವಾಗಿ ಮಹರ್ಷಿ ಭಗೀರಥ ಜಯಂತಿ ಆಚರಣೆ - Bhagirath Jayanti Dharwad District
ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರಥ ಜಯಂತಿಯನ್ನು ಆಚರಿಸಿದ್ದು, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ.ಸತೀಶ್, ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇನ್ನು ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ್ ಮದೀನಕರ್, ಡಾ. ಸುಜಾತಾ ಹಸವಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.