ಧಾರವಾಡ: ಕೋವಿಡ್-19 ಸೋಂಕು ತಡೆಯಲು ದೇಶದಾದ್ಯಂತ ಏಪ್ರಿಲ್ 14ರವರೆಗೆ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಅನಗತ್ಯವಾಗಿ ಯಾರೂ ಹೊರ ಬರದಂತೆ ನಿರ್ಬಂಧ ಹೇರಲಾಗಿದೆ. ಆದರೆ ಕೆಲವರು ಅನಗತ್ಯ ಓಡಾಟ ಮತ್ತು ವಾಹನಗಳ ಸಂಚಾರ ನಿಷೇಧವನ್ನು ಉಲ್ಲಂಘಿಸಿದ್ದಾರೆ. ಇಂತಹ ವಾಹನ ಸವಾರರಿಗೆ ಪೊಲೀಸರು ಚುರುಕು ಮುಟ್ಟಿಸಿದ್ದಾರೆ.
ಲಾಕ್ಡೌನ್ ಉಲ್ಲಂಘನೆ: ಧಾರವಾಡ ಗ್ರಾಮೀಣ ಭಾಗದಲ್ಲಿ 176 ವಾಹನ ವಶ, 23 ಜನರ ಬಂಧನ
ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಹಿನ್ನೆಲೆ ಅನಗತ್ಯವಾಗಿ ಯಾರೂ ಹೊರ ಬರದಂತೆ ನಿರ್ಬಂಧ ಹೇರಲಾಗಿದೆ. ಆದರೆ ಕೆಲವರು ಅನಗತ್ಯ ಓಡಾಟ ಮತ್ತು ವಾಹನಗಳ ಸಂಚಾರ ನಿಷೇಧವನ್ನು ಉಲ್ಲಂಘಿಸಿದ್ದಾರೆ. ಇಂತಹ ವಾಹನ ಸವಾರರಿಗೆ ಪೊಲೀಸರು ಚುರುಕು ಮುಟ್ಟಿಸಿದ್ದಾರೆ.
ಲಾಕ್ಡೌನ್ ಉಲ್ಲಂಘನೆ: ಧಾರವಾಡ ಗ್ರಾಮೀಣ ಭಾಗದಲ್ಲಿ 176 ವಾಹನ ವಶ-23 ಜನರ ಬಂಧನ
ಜಿಲ್ಲೆಯಾದ್ಯಂತ ಅನಗತ್ಯವಾಗಿ ಓಡಾಡಿದ 173 ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಂಡು 67,500 ರೂಪಾಯಿ ದಂಡ ವಿಧಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಎಚ್ಚರಿಕೆ ನೀಡಿದ್ದಾರೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 17 ಪ್ರಕರಣಗಳಲ್ಲಿ 20, 689 ರೂ. ದಂಡ ವಿಧಿಸಿಲಾಗಿದೆ. 514 ಕಳ್ಳತನ ಪ್ರಕರಣಗಳಲ್ಲಿ 3 ದ್ವಿಚಕ್ರ ವಾಹನ ವಶಕ್ಕೆ ಪಡೆದು, 23 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.