ಹುಬ್ಬಳ್ಳಿ:ಮಹದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟದಲ್ಲಿ ಸದಾ ಭಾಗಿಯಾಗಿ ಬೆಂಬಲ ನೀಡಿರುವ ಪತ್ರಕರ್ತರಿಗೆ ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಮಹದಾಯಿ ಗೆಜೆಟ್ ನೋಟಿಫಿಕೇಶನ್: ಹುಬ್ಬಳ್ಳಿಯಲ್ಲಿ ಪತ್ರಕರ್ತರಿಗೆ ಸನ್ಮಾನ - hubli latest news
ಮಹದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟದಲ್ಲಿ ಸದಾ ಭಾಗಿಯಾಗಿ ಬೆಂಬಲ ನೀಡಿರುವ ಪತ್ರಕರ್ತರಿಗೆ ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಮುತ್ತಣ್ಣವರ, ನಾಲ್ಕು ದಶಕಗಳ ಹೋರಾಟಕ್ಕೆ ವರದಿಗಾರಿಕೆ ಮೂಲಕ ಬೆಂಬಲ ಸೂಚಿಸಿರುವ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಕ್ಷೇತ್ರದ ಬೆಂಬಲದಿಂದಲೇ ಮಹದಾಯಿ ಹೋರಾಟಕ್ಕೆ ಜಯ ಸಿಕ್ಕಿದೆ. ಇದು ನಮ್ಮ ನಾಲ್ಕು ದಶಕಗಳ ಹೋರಾಟಕ್ಕೆ ಸಿಕ್ಕಿರುವ ಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಕನ್ನಡ ಚಿತ್ರರಂಗದಿಂದ ಹಲವಾರು ನಟರು ಬಂದು ಕಳಸಾ ಬಂಡೂರಿ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದವರು ಮುಂಚೂಣಿಯಲ್ಲಿ ನಿಂತು ಉತ್ತರ ಕರ್ನಾಟಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅವರಿಗೂ ಸನ್ಮಾನ ಮಾಡುತ್ತೇವೆಂದು ತಿಳಿಸಿದರು.