ಕರ್ನಾಟಕ

karnataka

ETV Bharat / state

ಮಹದಾಯಿ,ಉತ್ತರಕರ್ನಾಟಕಕ್ಕೆ ಅನ್ಯಾಯವಾಗಲ್ಲ.. ಸಚಿವ ಸಿ ಸಿ ಪಾಟೀಲ್ - ಅರಣ್ಯ ಸಚಿವ ಸಿ.ಸಿ. ಪಾಟೀಲ

ಮಹದಾಯಿ ಹೋರಾಟ ಆರಂಭವಾಗಿದ್ದೇ ಬಿಜೆಪಿಯಿಂದ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಹದಾಯಿಗೆ ಸಂಬಂಧಿಸಿದಂತೆ ಸಿಹಿಸುದ್ದಿ ನೀಡಲಿದ್ದಾರೆ ಎಂದರು.

dwd
ಸಚಿವ ಸಿ.ಸಿ.ಪಾಟೀಲ್

By

Published : Dec 22, 2019, 12:45 PM IST

ಧಾರವಾಡ:ಮಹದಾಯ ವಿಷಯದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದು ಎಂದು ಧಾರವಾಡದಲ್ಲಿ ಅರಣ್ಯ ಸಚಿವ ಸಿ ಸಿ ಪಾಟೀಲ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಪ್ರಾರಂಭ ಮಾಡಿದವರೇ ಬಿಜೆಪಿಯವರು. ನಿನ್ನೆಯಷ್ಟೇ ಪ್ರಕಾಶ ಜಾವ್ಡೇಕರ ಕರ್ನಾಟಕಕ್ಕೆ ಸಿಹಿ ಸುದ್ದಿ ಅಂತಾ ಹೇಳಿದ್ದಾರೆ. ಅವರ ಮಾತಿನಲ್ಲಿ ನಮಗೆ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಚಿವ ಸಿ ಸಿ ಪಾಟೀಲ್..

ಕೇಂದ್ರ ಸಚಿವರೊಂದಿಗೆ ಬಸವರಾಜ ಬೊಮ್ಮಾಯಿ ಚರ್ಚೆ ಮಾಡುತ್ತಿದ್ದಾರೆ. ಕೇಂದ್ರದಿಂದ ಮಹದಾಯಿ ಹೋರಾಟಗಾರರಿಗೆ ಮತ್ತು ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗದು. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲಾರೆ. ಆದರೆ, ಜಾವಡೇಕರ ಹೇಳಿದ್ದರಲ್ಲಿ ವಿಶ್ವಾಸ ಇದೆ ಅಂತಾ ಹೇಳಬಲ್ಲೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಮಾತನಾಡಿದ ಅವರು, ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಈಗಾಗಲೇ ಹೆಚ್ಚುವರಿಯಾಗಿ ಒಂದೊಂದು ಖಾತೆ ಕೊಟ್ಟಿದ್ದಾರೆ. ನನಗೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಜೊತೆಗೆ ಪರಿಸರ ಖಾತೆ ಕೊಟ್ಟಿದ್ದಾರೆ. ಈಗ ಯಾವ ಖಾತೆ ಯಾರಿಗೆ ಕೊಡಬೇಕು, ಯಾರಿಗೆ ಬಿಡಬೇಕು ಎನ್ನುವುದು ಸಿಎಂ ಪರಮಾಧಿಕಾರ ಎಂದು ಹೇಳಿದ್ದಾರೆ.

ABOUT THE AUTHOR

...view details