ಹುಬ್ಬಳ್ಳಿ:ಯಾವುದೇ ಸರ್ಕಾರ ಬಂದರೂ, ಯಾರೇ ಮುಖ್ಯಮಂತ್ರಿ ಆದರೂ ನಮ್ಮ ಉತ್ತರ ಕರ್ನಾಟಕಕ್ಕೆ ಮಾತ್ರ ನ್ಯಾಯ ಸಿಗುತ್ತಿಲ್ಲ. ಬಂದವರು ಬಹಳಷ್ಟು ಮಾತನಾಡಿ ಮೂಗಿಗೆ ತುಪ್ಪ ಒರೆಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದ್ದರೂ ಕಾಮಗಾರಿ ಮಾತ್ರ ಆರಂಭವಾಗುತ್ತಿಲ್ಲ.
ಹೌದು. ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಮಹದಾಯಿ ಯೋಜನೆ ಮಾತ್ರ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈಗಾಗಲೇ 3 ಬಜೆಟ್ಗಳಲ್ಲಿ ಮೂರು ಸಾವಿರ ಕೋಟಿಗೂ ಅಧಿಕ ಅನುದಾನ ಮೀಸಲಿಡಲಾಗಿದೆ.
ಹೋರಾಟಗಾರರ ಆಕ್ರೋಶ: ಆದರೆ, ಬರುವ ಜನಪ್ರತಿನಿಧಿಗಳು ಮಾತ್ರ ಭರವಸೆ ನೀಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಾರೆ. ಇದೇ ಭಾಗದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೂಡ ಸಾಕಷ್ಟು ಭರವಸೆ ಮಾತುಗಳನ್ನಾಡಿದ್ದರು. ಅಲ್ಲದೇ ಮೊನ್ನೆ ಮಂಡಿಸಿದ ಬಜೆಟ್ನಲ್ಲಿ 1000 ಕೋಟಿ ಮೀಸಲಿಟ್ಟಿದ್ದಾರೆ. ಆದರೆ, ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಇದು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.