ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ವಾಣಿಜ್ಯ ನಗರಿಯಲ್ಲಿಂದು ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮುಖಂಡರು ವಿಜಯೋತ್ಸವ ಆಚರಿಸಿದರು.
ಮಹದಾಯಿ ಗೆಜೆಟ್ ನೋಟಿಫಿಕೇಶನ್: ಹುಬ್ಬಳ್ಳಿಯಲ್ಲಿ ಬಿಜೆಪಿ ಸೆಲಬ್ರೇಶನ್ - ಮಹದಾಯಿ ಹೋರಾಟ
ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ವಾಣಿಜ್ಯ ನಗರಿಯಲ್ಲಿಂದು ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮುಖಂಡರು ವಿಜಯೋತ್ಸವ ಆಚರಿಸಿದರು.
ಕೇಂದ್ರದಿಂದ ಮಹದಾಯಿ ಅಧಿಸೂಚನೆ:ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಭ್ರಮಾಚರಣೆ
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹಿಳಾ ಕಾರ್ಯಕರ್ತರು ಹಾಗೂ ರೈತ ಮುಖಂಡರು ವಿವಿಧ ವಾದ್ಯ ಬಾರಿಸುವ ಮೂಲಕ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು. ಕಳೆದ ನಾಲ್ಕು ದಶಕಗಳ ರೈತರ ಹೋರಾಟಕ್ಕೆ ಜಯ ತಂದು ಕೊಟ್ಟ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾರ್ಯಕರ್ತರು ಈ ವೇಳೆ ಅಭಿನಂದನೆ ಸಲ್ಲಿಸಿದರು .
ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು ವಿಜಯೋತ್ಸವ ಆಚರಿಸಿದರು.