ಹುಬ್ಬಳ್ಳಿ: ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಮತ್ತು ಕಾರ್ಣಿಕೋತ್ಸವವನ್ನು ರದ್ದುಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ರದ್ದು : ಬಳ್ಳಾರಿ ಡಿಸಿ ಮೇಲೆ ಭಕ್ತರ ಆಕ್ರೋಶ
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾತ್ರೆ, ಸಮಾವೇಶ, ಹೀಗೆ ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟರೂ, ಬಳ್ಳಾರಿ ಜಿಲ್ಲಾಧಿಕಾರಿಗಳು ಮಾತ್ರ ಮೈಲಾರಲಿಂಗೇಶ್ವರ ಜಾತ್ರೆಗೆ ಹೊರಗಿನ ಭಕ್ತರಿಗೆ ಪ್ರವೇಶ ನೀಡದಿರುವುದು ಭಕ್ತರಲ್ಲಿ ಗೊಂದಲ ಮೂಡಿಸಿದೆ..
ನಗರದಲ್ಲಿಂದು ಮಾತನಾಡಿದ ಭಕ್ತರು, ಫೆಬ್ರವರಿ 19ರಿಂದ ಮಾರ್ಚ್ 2ರವರೆಗೆ ನಡೆಯಲಿರುವ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿರುವ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಮತ್ತು ಕಾರ್ಣಿಕೋತ್ಸವವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಗೈಡ್‍ಲೈನ್ಸ್ ನೆಪದಲ್ಲಿ ಜಾತ್ರೆಗೆ ಕಡಿವಾಣ ಹಾಕಿರುವುದು ಸರಿಯಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ಜಾತ್ರೆಗೆ ಅನುಮತಿ ಕೊಡಬೇಕೆಂದು ಮೈಲಾರಿಂಗೇಶ್ವರ ಭಕ್ತರು ಒತ್ತಾಯಿಸಿದರು.
ಮೈಲಾರ ಲಿಂಗೇಶ್ವರ ಜಾತ್ರೆ ಕಾರ್ಣಿಕೋತ್ಸವದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಸಂಪೂರ್ಣ ನಿಷೇಧಿಸಲಾಗಿದೆ. ಇದರಿಂದ ಭಕ್ತರಿಗೆ ಅಸಮಾಧಾನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾತ್ರೆ, ಸಮಾವೇಶ, ಹೀಗೆ ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟರೂ, ಬಳ್ಳಾರಿ ಜಿಲ್ಲಾಧಿಕಾರಿಗಳು ಮಾತ್ರ ಮೈಲಾರಲಿಂಗೇಶ್ವರ ಜಾತ್ರೆಗೆ ಹೊರಗಿನ ಭಕ್ತರಿಗೆ ಪ್ರವೇಶ ನೀಡದಿರುವುದು ಭಕ್ತರಲ್ಲಿ ಗೊಂದಲ ಮೂಡಿಸಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೇ ನಿಷೇಧದ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.