ಹುಬ್ಬಳ್ಳಿ:ಈ ಬಾರಿ ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಮುಂಬೈ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗದ ಎಲ್ಲ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದು, ಸೋಲಿಲ್ಲದ ಸರದಾರ ಎಂದು ಹೇಳಿಕೊಂಡು ತಿರುಗುವ ಮಲ್ಲಿಕಾರ್ಜುನ ಖರ್ಗೆಗೆ ಸೋಲು ಖಚಿತವೆಂದು ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ ಭವಿಷ್ಯ ನುಡಿದರು.
ನಗರದ ಬಿಜೆಪಿ ಕಾರ್ಯದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಒಳಬೇಗುದಿ ಹೆಚ್ಚಿದ್ದು, ಅವರನ್ನು ಸೋಲಿಸಲು ಜನ ಸನ್ನದ್ಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಒಂಟಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಸೋಲಿಲ್ಲದ ಸರದಾರ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ ಎಂದರು.