ಧಾರವಾಡ: ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಪತ್ನಿ ಮತ್ತು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಎಸ್‌ಪಿ ಲೋಕೇಶ್ ಮಾಹಿತಿ ನೀಡಿದರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಹಲ್ಲೆಗೊಳಗಾದ ಪತ್ನಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ನಂತರ ಫಕೀರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಯಾವ ಕಾರಣಕ್ಕೆ ಆಗಿದೆ ಅಂತಾ ತನಿಖೆ ನಡೆಯುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಇದನ್ನೂ ಓದಿ:ಅಮಾನವೀಯ.. ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ ವಿಧವೆಗೆ ಚಪ್ಪಲಿ ಹಾರ, ಮೆರವಣಿಗೆ, ಹಲ್ಲೆ!
ಪತ್ನಿ, ಮಕ್ಕಳ ಮೇಲೆ ಹಲ್ಲೆ ಮಾಡಿದ ಫಕೀರಪ್ಪನ ಮೇಲೆ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಆತ ಒಬ್ಬ ಕಟ್ಟಡ ಕಾರ್ಮಿಕ. ಆದರೆ ಸ್ಥಳೀಯರ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹವಿತ್ತು. ಅದರಿಂದಾಗಿ ಘಟನೆ ನಡೆದಿರುವ ಶಂಕೆ ಇದೆ ಎಂದು ಎಸ್.ಪಿ.ಲೋಕೇಶ್ ಹೇಳಿದರು.