ಹುಬ್ಬಳ್ಳಿ(ಧಾರವಾಡ): ವಿದ್ಯುತ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸುವಲ್ಲಿ ಸ್ಥಳೀಯರು, ಹೆಸ್ಕಾಂ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ ಯಶಸ್ವಿಯಾಗಿದ್ದಾರೆ.
ಬಿಡ್ನಾಳ ಬಳಿ ರಾಘವೇಂದ್ರ ಬಳ್ಳಾರಿ ಎನ್ನುವ ವ್ಯಕ್ತಿ 11 ಕೆವಿ ಹೈಟೆನ್ಷನ್ ಟವರ್ ಮೇಲೆ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ರಾಘವೇಂದ್ರ ಅವರನ್ನು ಕೆಳಗಿಳಿಸಲು ಪ್ರಯತ್ನಿಸಿದ್ದಾರೆ. ಆಗ ಸ್ಥಳೀಯರೊಬ್ಬರು ಹೆಸ್ಕಾಂ ಅಧಿಕಾರಿ ಕಿರಣಕುಮಾರ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಕಾರ್ಯ ಪ್ರವೃತ್ತರಾದ ಅಧಿಕಾರಿ ವಿದ್ಯುತ್ ಸಂಪರ್ಕ ಬಂದ್ ಮಾಡಿಸಿದರು.