ಧಾರವಾಡ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧರೊಬ್ಬರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ನಡೆದಿದೆ.
ವಿರುಪಾಕ್ಷಪ್ಪ ಆಚಮಟ್ಟಿ (58) ಮೃತ ದುರ್ದೈವಿ. ಲಕ್ಷಣ ಎಂಬಾತ ಕೊಲೆಗೈದ ಆರೋಪಿ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಉಂಟಾದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ.