ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಐಎಎಸ್ ಹಿರಿಯ ಅಧಿಕಾರಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ - ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ
ಸಚಿವ ಸಂಪುಟ ರಚನೆ ಬೆನ್ನಲ್ಲೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
![ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ manjunath-prasad-appointed-cm-general-secretary](https://etvbharatimages.akamaized.net/etvbharat/prod-images/768-512-12686494-thumbnail-3x2-kdkdd.jpg)
ಮಂಜುನಾಥ್ ಪ್ರಸಾದ್ ನೇಮಕ
ನೂತನ ಸರ್ಕಾರ ರಚನೆ ಆಗುತ್ತಿದ್ದ ಹಾಗೇ ಪ್ರಮುಖ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಮಂಜುನಾಥ್ ಪ್ರಸಾದ್ ಅವರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಹೊಣೆಯನ್ನೂ ನೀಡಲಾಗಿದೆ.
ಈ ಮುಂಚೆ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ರಮಣ ರೆಡ್ಡಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.