ಕರ್ನಾಟಕ

karnataka

ETV Bharat / state

ಮದುವೆಯಾಗುವುದಾಗಿ ನಂಬಿಸಿ ವಂಚನೆ... ಆರೋಪಿ ಬಂಧನ - ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ

ಮದುವೆಯಾಗುವುದಾಗಿ ನಂಬಿಸಿ, ವಧುವಿನ ಮನೆಯವರಿಂದ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ವ್ಯಕ್ತಿಯನ್ನ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

marriage-cheating-dot-accused-arrest-in-hubli
ಮದುವೆಯಾಗುವುದಾಗಿ ನಂಬಿಸಿ ವಂಚನೆ..ಆರೋಪಿ ಬಂಧನ

By

Published : Nov 30, 2019, 11:33 AM IST

ಹುಬ್ಬಳ್ಳಿ:ಮದುವೆಯಾಗುವುದಾಗಿ ನಂಬಿಸಿ, ವಧುವಿನ ಮನೆಯವರಿಂದ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ವ್ಯಕ್ತಿಯನ್ನ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಮೂಲದ ಪುಟ್ಟಯ್ಯ ಅಲಿಯಾಸ್​ ರಮೇಶ್​ ಸಿದ್ದಮಾಧು ಬಂಧಿತ ಆರೋಪಿ. ಹುಬ್ಬಳ್ಳಿ ನಿವಾಸಿಯೊಬ್ಬರು ತಮ್ಮ ಮಗಳಿಗೆ ವರ ಹುಡುಕಲು 2016ರಲ್ಲಿ ಗೃಹಶೋಭಾ ಮಾಸ ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ರು. ಜಾಹೀರಾತಿನಲ್ಲಿ ಮಗಳ ಮಾಹಿತಿ ಹಾಗೂ ಮೊಬೈಲ್ ನಂಬರ್​ ಸಹ ನೀಡಿದ್ರು. ಇದನ್ನ ಅಸ್ತ್ರವಾಗಿ ಮಾಡಿಕೊಂಡ ಆರೋಪಿ, ವಧುವಿನ ಮನೆಯವರಿಂದ ಬರೋಬ್ಬರಿ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.

ಜಾಹೀರಾತು ನೋಡಿ ವಧುವಿನ ತಂದೆಯನ್ನ ಸಂಪರ್ಕಿಸಿದ್ದ ರಮೇಶ್​ ಸಿದ್ದಮಾಧು, ತಾನೂ ಕೆಪಿಟಿಸಿಎಲ್ ಗುಂಡ್ಲುಪೇಟೆಯಲ್ಲಿ ಎಇಇ ಎಂದು ಪರಿಚಯ ಮಾಡಿಕೊಂಡಿದ್ದ. ತನಗೆ ಶ್ರೀಘ್ರದಲ್ಲೆ ಪ್ರಮೋಷನ್ ಆಗಲಿದೆ. ಗುಂಡ್ಲುಪೇಟೆಯಿಂದ ಹುಣಸೂರಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಮೇಲಧಿಕಾರಿಗಳಿಗೆ ಹಣ ನೀಡಬೇಕು ಎಂದು ಹುಡುಗಿಯ ಮನೆಯವರನ್ನ ನಂಬಿಸಿದ್ದ. ಅಲ್ಲದೇ 2016 ರಿಂದ 2018ರವರೆಗೆ ಬ್ಯಾಂಕ್​ ಅಕೌಂಟ್ ಮೂಲಕ 19 ಲಕ್ಷ ರೂಪಾಯಿ ಹಣವನ್ನ ಪಡೆದಿದ್ದ.

ಬಳಿಕ ಹಣವನ್ನ ಮರಳಿ ನೀಡದೇ, ಮಗಳನ್ನ ಮದುವೆಯಾಗದೇ ವಂಚಿಸಿದ ಆರೋಪಿ ವಿರುದ್ಧ ಹುಡುಗಿಯ ಮನೆಯವರು ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನ ಬಂಧಿಸಿ, ಆರೋಪಿಯಿಂದ 19 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ABOUT THE AUTHOR

...view details