ಹುಬ್ಬಳ್ಳಿ: ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆಯ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕು ಆಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಡೇ ಅಭಿಯಾನಕ್ಕೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ಮಾಸ್ಕ್ ಡೇ: ಹುಬ್ಬಳ್ಳಿಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಸಚಿವ ಶೆಟ್ಟರ್ ಚಾಲನೆ - ಸಚಿವ ಜಗದೀಶ್ ಶೆಟ್ಟರ್ ಸುದ್ದಿ
ಕಿತ್ತೂರು ಚನ್ನಮ್ಮ ವೃತ್ತದಿಂದ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಲ್ಯಾಮಿಂಗ್ಟನ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕೊಪ್ಪಿಕರ್ ರಸ್ತೆ, ದುರ್ಗದಬೈಲ್ ವರೆಗೆ ಸಂಚರಿಸಿತು.
ಜನಜಾಗೃತಿ ಅಭಿಯಾನಕ್ಕೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ
ಕಿತ್ತೂರು ಚನ್ನಮ್ಮ ವೃತ್ತದಿಂದ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಲ್ಯಾಮಿಂಗ್ಟನ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕೊಪ್ಪಿಕರ್ ರಸ್ತೆ, ದುರ್ಗದಬೈಲ್‌ವರೆಗೆ ಸಂಚರಿಸಿತು.
ಈ ವೇಳೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ಹೋಗಲಾಡಿಸಬಹುದು ಎಂದರು.