ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ವೇಳೆ, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ: ಶ್ರೀರಾಮ ಸೇನೆ ಒತ್ತಾಯ - Mass celebrations should not be allowed
ರಂಜಾನ್ ಹಬ್ಬದಲ್ಲಿ ಯಾವುದೇ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸದೇ, ಸಾರ್ವಜನಿಕ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಶ್ರೀರಾಮ ಸೇನೆ
ರಾಜ್ಯ ಹಾಗೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಮೂಹಿಕ ಪ್ರಾರ್ಥನೆ, ಸಭೆ ಸಮಾರಂಭ ತಡೆದು ದೇವಸ್ಥಾನ, ಚರ್ಚ್, ಮಸೀದಿ ಬಂದ್ ಮಾಡಿಸಿದ್ದು, ಸ್ವಾಗತಾರ್ಹ. ರಂಜಾನ್ ಹಬ್ಬದಲ್ಲಿ ಕೂಡ ಯಾವುದೇ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜು ಗಾಡಗೋಳಿ, ಅಣ್ಣಪ್ಪ ದಿವಟಿಗಿ, ಮಂಜು ಕಾಟಕರ, ಸಿದ್ದು ರಾಯನಾಳ, ಅಭಿಷೇಕ ಕಾಂಬಳೆ ಸೇರಿದಂತೆ ಇತರರು ಇದ್ದರು.
Last Updated : May 22, 2020, 6:43 PM IST