ಕರ್ನಾಟಕ

karnataka

ETV Bharat / state

ಕಟ್ಟಡ ಕುಸಿತದ ವೇಳೆ ಪ್ರಾಣ ಪಣಕ್ಕಿಟ್ಟು ರಕ್ಷಣಾ ಕಾರ್ಯ: ಎಸ್.ನವೀನ್​ಗೆ ಮುಖ್ಯಮಂತ್ರಿ ಪದಕ - Medal of Chief minister to S Naveen

ಜೀವದ ಹಂಗು ತೊರೆದು ಕರ್ತವ್ಯ ಪ್ರಜ್ಞೆ ಮೆರೆದ ಬೆಂಗಳೂರಿನ ಹೆಬ್ಬಾಳದ ಅಗ್ನಿಶಾಮಕ ಚಾಲಕ ಎಸ್.ನವೀನ್ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿದ್ದಾರೆ.

ಎಸ್.ನವೀನ್​ಗೆ ಮುಖ್ಯಮಂತ್ರಿ ಪದಕ
ಎಸ್.ನವೀನ್​ಗೆ ಮುಖ್ಯಮಂತ್ರಿ ಪದಕ

By

Published : Jul 13, 2021, 6:26 PM IST

Updated : Jul 13, 2021, 6:35 PM IST

ಧಾರವಾಡ: ನಗರದಲ್ಲಿ 2019 ರಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ಪ್ರಜ್ಞೆ ಮೆರೆದ ಬೆಂಗಳೂರು ಹೆಬ್ಬಾಳದ ಅಗ್ನಿಶಾಮಕ ಚಾಲಕ ಎಸ್.ನವೀನ್ ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ” ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿನ್ನದ ಪದಕ ಪ್ರದಾನ ಮಾಡಿದರು.

ಎಸ್.ನವೀನ ಅವರು ಕಳೆದ ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ವೃತ್ತಿಯ ಜೊತೆಯಲ್ಲಿಯೇ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ ಮತ್ತು ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡುತ್ತಿದ್ದಾರೆ. 2019 ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿತ ಘಟನೆಯಲ್ಲಿ ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿಯು ಇವರದ್ದಾಗಿದೆ.

Last Updated : Jul 13, 2021, 6:35 PM IST

For All Latest Updates

TAGGED:

ABOUT THE AUTHOR

...view details