ಕರ್ನಾಟಕ

karnataka

ETV Bharat / state

ಧಾರವಾಡ: ಅಧಿವೇಶನದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ರಾಜ್ಯ ಸರ್ಕಾರ ವಿಧಾನಮಂಡಲದ ಅಧಿವೇಶನದಿಂದ ಮಾಧ್ಯಮಗಳನ್ನು ಹೊರಗಿಟ್ಟಿರುವ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಾಧ್ಯಮದವರಿಗೆ ಅವಕಾಶ ನೀಡಲು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

By

Published : Oct 10, 2019, 1:16 PM IST

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಧಾರವಾಡ

ಧಾರವಾಡ:ರಾಜ್ಯ ಸರ್ಕಾರ ವಿಧಾನಮಂಡಲದ ಅಧಿವೇಶನದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿರುವ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೆ, ಅತೀವೃಷ್ಟಿಯಲ್ಲಿ ನಿರಾಶ್ರಿತರಿಗೆ ಸೂಕ್ತ ಪರಿಹಾರ ಒದಗಿಸದೇ ಇರುವುದರಿಂದ ಈ ಭಾಗದ ಸಾರ್ವಜನಿಕರಿಗೆ ಹೆದರಿ ಭಯ ಭೀತರಾಗಿ ಬೆಂಗಳೂರಿನಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದ್ದಾರೆಂದು ಆರೋಪಿಸಿದರು.

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಧಾರವಾಡ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳಿಗೆ ಅವಕಾಶ ನೀಡದೇ ಅಧಿವೇಶನ ನಡೆಸುತ್ತಿರುವುದು ಕಾನೂನು ವಿರೋಧವಾಗಿದೆ. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಅಧಿವೇಶನದಲ್ಲಿ ಮಾಧ್ಯಮಗಳಿಗೆ ಅವಕಾಶ ನೀಡುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ರವಾನಿಸಿದರು.

ABOUT THE AUTHOR

...view details