ಹುಬ್ಬಳ್ಳಿ : ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ನಾಳೆ ರೈತ ಸಂಘ ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿ ವಿವಿಧ ಸಂಘಟನೆಗಳಿಂದ ಚಿಂತನಾ ಸಮಾವೇಶ ನಡೆಸಲಾಯಿತು.
ಎಪಿಎಂಸಿ ವ್ಯಾಪಾರಸ್ಥರ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ನಾಳೆ ಕರ್ನಾಟಕ ಬಂದ್ ಮಾಡುವ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ರೈತರಪರ, ಕಾರ್ಮಿಕರ ಸಂಘ ಕರ್ನಾಟಕ ರಕ್ಷಣಾ ವೇದಿಕೆ, ಆಟೋ ಚಾಲಕರ ಹಾಗೂ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾಗಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದವು.