ಧಾರವಾಡ: ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಅನಾಥವಾಗಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್ ಸಿಬ್ಬಂದಿ ನಕಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಾನಸಿಕ ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್ ಸಿಬ್ಬಂದಿ ನಿರಾಕರಣೆ? - ಮಾನಸಿಕ ಅಸ್ವಸ್ಥ ಮಹಿಳೆ
ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಅನಾಥವಾಗಿ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್ ಸಿಬ್ಬಂದಿ ನಕಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಾನಸಿಕ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲು ಅಂಬ್ಯೂಲೆನ್ಸ್ ಸಿಬ್ಬಂದಿ ನಕಾರ
ಅನಾಥವಾಗಿ ಬಿದ್ದ ಮಾನಸಿಕ ಅಸ್ವಸ್ಥೆ: ಸಹಾಯಕ್ಕೆ ಬಾರದ ಆ್ಯಂಬುಲೆನ್ಸ್ ಸಿಬ್ಬಂದಿ
ಅಳ್ನಾವರ ಪಟ್ಟಣದ ಕರ್ನಾಟಕ ಬ್ಯಾಂಕ್ ಎದುರು ಅಪರಿಚಿತ ಮಹಿಳೆಯೊಬ್ಬಳು ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದು ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಆದರೆ ಆ್ಯಂಬುಲೆನ್ಸ್ ಸಿಬ್ಬಂದಿ ಸಹಾಯಕ್ಕೆ ಬರಲು ನಕಾರ ಮಾಡಿದ್ದು, ಅನಾಥ ರೋಗಿಗಳನ್ನು ಕರೆತರಲು ಆಗುವುದಿಲ್ಲವೆಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.