ಧಾರವಾಡ:ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ದೆಹಲಿ ಹಿಂಸಾಚಾರ: ರಾಷ್ಟ್ರೀಯತೆಯನ್ನು ಪ್ರಶ್ನಿಸುವವರ ವಿರುದ್ಧ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಿಡಿ - Minister kota shreenivas Poojary
ಸಿಎಎ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ನಡೆಸುತ್ತಿರುವವರ ವಿರುದ್ಧ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಎ ರಾಷ್ಟ್ರೀಯ ವಿಚಾರ ಇಟ್ಟುಕೊಂಡು ಮಾಡಿರುವ ಕಾಯ್ದೆ. ಇದನ್ನು ಸ್ವಾಗತಿಸುವುದು ನಮ್ಮ ಕರ್ತವ್ಯ. ಆದ್ರೆ ಕೆಲವರು ಕಾಯ್ದೆ ವಿರೋಧಿಸುವ ನೆಪದಲ್ಲಿ ರಾಷ್ಟ್ರೀಯತೆ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. ಪಾಕಿಸ್ತಾನ ಪರ ಮಾತನಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾಯ್ದೆ ಬಗ್ಗೆ ಚರ್ಚೆ ಮಾಡಲಿ. ಆದರೆ ಅದರ ಹೆಸರಿನಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹೇಳುವುದನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ರವಾನಿಸಿದ್ದಾರೆ.
ಪ್ರತಿಪಕ್ಷದಲ್ಲಿ ಇದ್ದವರು ಎಲ್ಲವನ್ನೂ ವಿರೋಧಿಸುತ್ತಾರೆ. ಅದೇ ರೀತಿ ಈಗ ಕಾಯ್ದೆ ತಿದ್ದುಪಡಿ ವಿಷಯದಲ್ಲಿಯೂ ಇದೇ ಕೆಲಸವನ್ನು ಮಾಡುತ್ತಿದ್ದಾರೆ ಸಚಿವ ಪೂಜಾರಿ ಹರಿಹಾಯ್ದರು.