ಕರ್ನಾಟಕ

karnataka

ETV Bharat / state

ರಾತ್ರೋರಾತ್ರಿ ಜೋಶಿ ಭೇಟಿಯಾದ ಬೊಮ್ಮಾಯಿ: ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ?

ರಾಜ್ಯದಲ್ಲಿ ಹಲವು ರಾಜಕೀಯ ಬದಲಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ - ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭೇಟಿ ಮಾಡಿದ್ದಾರೆ. ಆದ್ರೆ ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ, ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಕೆಂದ್ರ ಸಚಿವರೊಂದಿಗೆ ಚರ್ಚಿಸಿರುವುದಾಗಿ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಜೋಶಿ ಭೇಟಿಯಾದ ಬೊಮ್ಮಾಯಿ
ಜೋಶಿ ಭೇಟಿಯಾದ ಬೊಮ್ಮಾಯಿ

By

Published : Jul 25, 2021, 7:03 AM IST

Updated : Jul 25, 2021, 12:47 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಈ ಹೊತ್ತಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶನಿವಾರ ರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ನಿವಾಸಕ್ಕೆ ಭೇಟಿ ನೀಡಿ, ಗೌಪ್ಯ ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿ ಬದಲಾದರೆ, ಆ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಹೆಸರು ಕೇಳಿ ಬರುತ್ತಿರುವ ಸಂದರ್ಭದಲ್ಲಿ, ಇಬ್ಬರೂ ನಾಯಕರು ಚರ್ಚೆ ನಡೆಸಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ರಾತ್ರೋರಾತ್ರಿ ಜೋಶಿ ಭೇಟಿಯಾದ ಬೊಮ್ಮಾಯಿ

ಇಬ್ಬರೂ ನಾಯಕರು ಆಗಾಗ್ಗೆ ಹುಬ್ಬಳ್ಳಿಗೆ ಬರುತ್ತಾರೆ. ಆದರೆ, ಭೇಟಿಯಾಗಿ ಚರ್ಚೆ ನಡೆಸುವುದಿಲ್ಲ. ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿರುವ ಈ ಸಮಯದಲ್ಲಿ ಇಬ್ಬರು ನಾಯಕರು ಗುಪ್ತವಾಗಿ ಮಾತುಕತೆ ನಡೆಸಿರುವುದು ಸಿಎಂ ಬದಲಾವಣೆಯ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.

ಇದನ್ನೂ ಓದಿ : 'ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ, ವರಿಷ್ಠರು ನೀಡುವ ಜವಾಬ್ದಾರಿ ನಿಭಾಯಿಸುವೆ'

ರಾಜಕೀಯವಾಗಿ ಯಾವುದೇ ಚರ್ಚೆ ಮಾಡಲು ಸಚಿವ ಜೋಶಿ ಅವರನ್ನು ಭೇಟಿ ಮಾಡಿಲ್ಲ. ಅವರು ಪ್ರತಿನಿಧಿಸುವ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಗ್ಗಾಂವಿಯೂ ಸೇರಿರುವುದರಿಂದ ಅಲ್ಲಿನ ಕೆಲವು ಕಾಮಗಾರಿ ಕುರಿತು ಚರ್ಚಿಸಿದ್ದೇನೆ. ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Last Updated : Jul 25, 2021, 12:47 PM IST

ABOUT THE AUTHOR

...view details