ಹುಬ್ಬಳ್ಳಿ(ಧಾರವಾಡ):ತಾರಿಹಾಳದಲ್ಲಿ 14 ಕೈಗಾರಿಕಾ ವಸಾಹತು ಪ್ರದೇಶಗಳಿವೆ. ಅನಧಿಕೃತವಾಗಿ ನಡೆಸುತ್ತಿರುವ ಕಾರ್ಖಾನೆಗಳ ಬಗ್ಗೆ ಮೂರು ದಿನದಲ್ಲಿ ಸರ್ವೇ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡಕ್ಕೆ ಒಳಗಾದ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿ ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಅದರಲ್ಲಿ ಮೂವರು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಭಾಯಿಸಿದ್ದಾರೆ. ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸಿದೆ ಎಂದರು.