ಧಾರವಾಡ:ಬಸವ ಜಯಂತಿ ಅಂಗವಾಗಿ ಇಂದು ನಗರದ ಕಲಾಭವನ ಆವರಣದಲ್ಲಿರುವ ಶ್ರೀ ಬಸವೇಶ್ವರರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಲಾರ್ಪಣೆ ಮಾಡಿದರು.
ಸಚಿವ ಜಗದೀಶ್ ಶೆಟ್ಟರ್ ರಿಂದ ಶ್ರೀ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ - Basava Jayanti
ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಇತರ ನಾಯಕರು ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಸಿಇಓ ಡಾ. ಬಿ. ಸಿ. ಸತೀಶ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಇದ್ದರು.