ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಸಿಎಂ ಜತೆ ಚರ್ಚಿಸಬೇಕು : ಜಗದೀಶ್ ಶೆಟ್ಟರ್ - ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಸಿಎಂ ಜೊತೆ ಚರ್ಚೆ

ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ಪಕ್ಷ ಕ್ರಮಕೈಗೊಳ್ಳುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವರಿಷ್ಠರು ಈ ವಿಷಯದ ಬಗ್ಗೆ ಹೇಳಿದ್ದಾರೆ. ಅದರ ಬಗ್ಗೆ ಮತ್ತೆ ಮಾತನಾಡುವುದಿಲ್ಲ..

ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ
ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

By

Published : Jul 10, 2021, 5:58 PM IST

ಹುಬ್ಬಳ್ಳಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ..

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಇನ್ನೂ ಪೂರ್ತಿಯಾಗಿ ಹೋಗಿಲ್ಲ. ಹೀಗಾಗಿ, ಅಧಿವೇಶವನ್ನು ಬೆಂಗಳೂರಲ್ಲಿ ನಡೆಸಬೇಕಾ, ಬೆಳಗಾವಿಯಲ್ಲಿ ನಡೆಸಬೇಕಾ ಎಂಬುದನ್ನು ಚರ್ಚಿಸಬೇಕು. ಈ ಹಿನ್ನೆಲೆಯಲ್ಲಿ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ಪಕ್ಷ ಕ್ರಮಕೈಗೊಳ್ಳುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವರಿಷ್ಠರು ಈ ವಿಷಯದ ಬಗ್ಗೆ ಹೇಳಿದ್ದಾರೆ. ಅದರ ಬಗ್ಗೆ ಮತ್ತೆ ಮಾತನಾಡುವುದಿಲ್ಲ ಎಂದರು.

ಇದನ್ನೂ ಓದಿ : 3ನೇ ಅಲೆಯಲ್ಲಿ ಮಕ್ಕಳಿಗೆ ಅಪಾಯವಿಲ್ಲ ಎಂದು ತಜ್ಞರ ವರದಿಯಲ್ಲಿದೆ : ಸಚಿವ ಡಾ.ಸುಧಾಕರ್

ABOUT THE AUTHOR

...view details