ಕರ್ನಾಟಕ

karnataka

ETV Bharat / state

ಶಾಮಿಯಾನ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಸಚಿವ ಜಗದೀಶ್ ಶೆಟ್ಟರ್ - ಶಾಮಿಯಾನಾ ಸಂಘದ ಅಧ್ಯಕ್ಷ ಜಿ ಶ್ರೀನಿವಾಸ

ಕೊರೊನಾ ವೈರಸ್ ಹಿನ್ನೆಲೆ ಜನ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಶಾಮಿಯಾನ ಕಾರ್ಮಿಕರು ಕೂಡಾ ಕಷ್ಟದ ಜೀವನ ನಡೆಸುತಿದ್ದಾರೆ. ಈ ಹಿನ್ನೆಲೆ ಕಾರ್ಮಿಕ ಇಲಾಖೆ, ಮಲಬಾರ್ ಗೋಲ್ಡ್ ಸೇರಿದಂತೆ ವಿವಿಧ ಸಂಸ್ಥೆಯ ಸಹಯೋಗದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

Minister jagadish Shetter distributes food kit to Shamiana workers in Hubli
ಹುಬ್ಬಳ್ಳಿಯ ಶಾಮಿಯಾನ ಕಾರ್ಮಿಕ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಿಸಿದ ಸಚಿವ ಶೆಟ್ಟರ್

By

Published : May 27, 2020, 3:43 PM IST

ಹುಬ್ಬಳ್ಳಿ: ಕೋವಿಡ್-19 ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಐದು ನೂರು ಶಾಮಿಯಾನ ಕಾರ್ಮಿಕರಿಗೆ ಜಿಲ್ಲೆಯ ಶ್ರೀನಿವಾಸ ಗಾರ್ಡನ್​ನಲ್ಲಿ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ಕಾರ್ಮಿಕ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಿ ನಂತರ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆ ಜನಜೀವನ ಸಂಕಷ್ಟಕ್ಕೆ ಸಿಲುಕಿದ್ದು,ಇಂತಹ ಸಂದರ್ಭದಲ್ಲಿ ಶಾಮಿಯಾನ ಕಾರ್ಮಿಕರು ಕೂಡಾ ಕಷ್ಟದ ಜೀವನ ನಡೆಸುತಿದ್ದಾರೆ. ಈ ಹಿನ್ನೆಲೆ ಕಾರ್ಮಿಕ ಇಲಾಖೆ, ಮಲಬಾರ್ ಗೋಲ್ಡ್ ಸೇರಿದಂತೆ ವಿವಿಧ ಸಂಸ್ಥೆಯ ಸಹಯೋಗದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು.

ಸಚಿವ ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದ್ದು,ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಉತ್ತಮವಾದ ಕಾರ್ಯನಿರ್ವಹಿಸುತ್ತಿದೆ ಎಂದ ಅವರು, ಸರ್ಕಾರದ ಎಲ್ಲ ವಿಭಾಗದ ಅಧಿಕಾರಿಗಳು ಉತ್ತಮವಾದ ಕಾರ್ಯನಿರ್ವಹಿಸಿದ ಹಿನ್ನೆಲೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದರು.

ಸತತ ಎರಡು ತಿಂಗಳ ಲಾಕ್​ಡೌನ್​ನಿಂದ ದೇಶದ ಆರ್ಥಿಕತೆ ಕುಸಿತ ಕಂಡಿರುವುದು ಮಾತ್ರವಲ್ಲದೇ, ಬಡಜನರು ಕೂಡಾ ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದು, ವಿವಿಧ ಕ್ಷೇತ್ರಗಳಿಗೆ ನೀಡಿದ ಅನುದಾನದ ಹಾಗೆಯೇ ಶಾಮಿಯಾನ ಕಾರ್ಮಿಕರಿಗೂ ಅನುದಾನದ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಮಿಯಾನ ಸಂಘದ ಅಧ್ಯಕ್ಷ ಜಿ ಶ್ರೀನಿವಾಸ, ಮಲಬಾರ್ ಗೋಲ್ಡ್​ ಅಂಡ್​ ಡೈಮಂಡ್ ಶಾಖಾ ಮುಖ್ಯಸ್ಥ ಶಶಾಂಕ್​ ಬೊಟೆ. ಬಾಬುರಾವ್,ಮೋಹನ ಏಕಬೋಟೆ ಸೇರಿದಂತೆ ಇತರರು ಇದ್ದರು.

ABOUT THE AUTHOR

...view details