ಕರ್ನಾಟಕ

karnataka

ETV Bharat / state

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಇನ್ನಷ್ಟು ಎಚ್ಚರಿಕೆ ವಹಿಸಿ: ಜಗದೀಶ ಶೆಟ್ಟರ್

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಪರಿಶೀಲನಾ ಸಭೆ ನಡೆಯಿತು.

jagadish shetter
ಜಗದೀಶ ಶೆಟ್ಟರ್

By

Published : Jun 10, 2020, 1:19 AM IST

ಧಾರವಾಡ:ಅನ್ಯ ಜಿಲ್ಲೆಗಳಿಗೆ ಹೋಲಿಸಿದಾಗ ಧಾರವಾಡದಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಇತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮುಂಗಾರು ಬಿತ್ತನೆ ಕಾರ್ಯಕ್ಕೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.

ಜಗದೀಶ ಶೆಟ್ಟರ್

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 20,177 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿರುವುದು ಉತ್ತಮ ಕಾರ್ಯ. ಹೊರರಾಜ್ಯಗಳಿಂದ ಬಂದ ಪ್ರಕರಣಗಳೇ ಅರ್ಧಕ್ಕಿಂತ ಹೆಚ್ಚು ವರದಿಯಾಗಿವೆ. ರೋಗವು ಸಾಮಾಜಿಕವಾಗಿ ಹರಡದಂತೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಪರಿಣಾಮ ಬೀರಿವೆ. ಮಳೆಗಾಲ ಆರಂಭದ ಈ ಸಮಯದಲ್ಲಿ ಕೊರೊನಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದರು.

ಸೋಯಾಬಿನ್ ಬಿತ್ತನೆ ಬೀಜಗಳ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ರೈತರಿಗೆ ಪರ್ಯಾಯ ಬೆಳೆಗಳನ್ನು ಸಲಹೆ ಮಾಡಲಾಗುವುದು. ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ, ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯಡಿ ಈ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಕಳೆದ ಸಾಲಿನ ಅತಿವೃಷ್ಟಿ ಸಮಯದಲ್ಲಿ ಹಾನಿಗೀಡಾದ ಮನೆಗಳ ಪುನರ್​​ನಿರ್ಮಾಣ ಕಾರ್ಯ ಚುರುಕುಗೊಳಿಸಬೇಕು. ಸರ್ಕಾರದ ವಿವಿಧ ಇಲಾಖೆಗಳಡಿ ಕೈಗೊಳ್ಳಬೇಕಾಗಿರುವ ರಸ್ತೆ, ಕಟ್ಟಡ ಮೊದಲಾದ ಅಭಿವೃದ್ಧಿ ಚಟುವಟಿಕೆಗಳನ್ನು ತ್ವರಿತಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ABOUT THE AUTHOR

...view details