ಧಾರವಾಡ : ಮುಖ್ಯಮಂತ್ರಿ ಬದಲಾವಣೆ ವಿಚಾರ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ - ಯಡಿಯೂರಪ್ಪ ಲೇಟೆಸ್ಟ್ ನ್ಯೂಸ್
ಯಡಿಯೂರಪ್ಪನವರ ನೇತೃತ್ವದಲ್ಲಿ ನಾವು ಸರ್ಕಾರ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಅವರು ಬದಲಾವಣೆ ಆಗುವುದಿಲ್ಲ. ಆ ವಿಚಾರವಾಗಿ ಯಾರು ಮಾತನಾಡುತ್ತಿದ್ದಾರೋ ಅವರನ್ನೇ ಕೇಳಬೇಕು..
shetter
ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಏಕೆ ನಡೆಯುತ್ತಿದೆ ಎಂಬುದು ನಮಗೆ ಗೊತ್ತಾಗುತ್ತಿಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಚೇಂಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನೇತೃತ್ವದಲ್ಲಿ ನಾವು ಸರ್ಕಾರ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಅವರು ಬದಲಾವಣೆ ಆಗುವುದಿಲ್ಲ. ಆ ವಿಚಾರವಾಗಿ ಯಾರು ಮಾತನಾಡುತ್ತಿದ್ದಾರೋ ಅವರನ್ನೇ ಕೇಳಬೇಕು ಎಂದು ಹೇಳಿದ್ರು.
Last Updated : May 29, 2021, 6:29 PM IST