ಹುಬ್ಬಳ್ಳಿ:ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಲ್ಲಿ ಕೆಲವೊಂದಿಷ್ಟು ಜನ ರಾಜಕಾರಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಜಲಶಕ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅತ್ಯಂತ ಭೀಕರ ಸ್ಥಿತಿಯಲ್ಲಿ ಎಲ್ಲರಿಗೂ ವೇತನ ಕೊಟ್ಟಿದ್ದಾರೆ. ಉಳಿದ ಎಲ್ಲವನ್ನೂ ಸಹಾನುಭೂತಿಯಿಂದ ಸರ್ಕಾರ ಪರಿಶೀಲನೆ ಮಾಡಲು ಸಿದ್ಧ. ಈಗ ತಕ್ಷಣವೇ ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.